ಕಲಬುರ್ಗಿ:ಅತಿಯಾದ ಮಳೆಯಿಂದಾಗಿ ಹಾನಿಗೊಳಗಾಗಿರುವರಾಜ್ಯದ 130 ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಿ ಕೇಂದ್ರ ಸರ್ಕಾರಕ್ಕೆಪಟ್ಟಿ ಕಳುಹಿಸಿಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅತಿವೃಷ್ಟಿ ಪರಿಹಾರವಾಗಿ ₹ 395 ಕೋಟಿ ಬಿಡುಗಡೆ ಮಾಡಿದೆ.ಈ ಹಣ ಸಾಕಾಗುವುದಿಲ್ಲ.ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದರು.
ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ.ಹೀಗಾಗಿ ಮತ್ತೊಮ್ಮೆ ಬೆಳೆ ಹಾನಿ ಸರ್ವೆ ಮಾಡುವಂತೆ ಸೂಚಿಸುತ್ತೇನೆ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.