ಬೆಂಗಳೂರು: ರಾಜ್ಯದ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಅನುದಾನಿತ ಕಾನೂನು ಕಾಲೇಜುಗಳ ಸಿಬ್ಬಂದಿಗೆ 2018ರ ಪರಿಷ್ಕೃತ ರಾಜ್ಯ ವೇತನ ಶ್ರೇಣಿ ನಿಗದಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದಿಂದ ವೇತನಾನುದಾನ ಪಡೆಯುವ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಖಾಸಗಿ ಅನುದಾನಿತ ಕಾನೂನು ಕಾಲೇಜುಗಳಿಗೆ ಮಾತ್ರ ಸಿಬ್ಬಂದಿಗೆ ಪರಿಷ್ಕೃತ ವೇತನ ಅನ್ವಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.