ADVERTISEMENT

‘ಪ್ರತ್ಯೇಕ ಪಾದಯಾತ್ರೆ’ಗೆ ಯತ್ನಾಳ, ಜಾರಕಿಹೊಳಿ ಸಭೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 0:27 IST
Last Updated 3 ಆಗಸ್ಟ್ 2024, 0:27 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯ ಸಾರಿರುವ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಅವರು ಗುರುವಾರ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಮಾಜಿ ಸಂಸದ ಪ್ರತಾಪಸಿಂಹ ಮತ್ತು ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪಕ್ಷದ ವತಿಯಿಂದ ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಯತ್ನಾಳ ಮತ್ತು ಜಾರಕಿಹೊಳಿ ಪ್ರತ್ಯೇಕ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಯತ್ನಾಳ, ‘ಪಾದಯಾತ್ರೆಯೂ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಬಳ್ಳಾರಿಗೆ ಪಾದಯಾತ್ರೆ ನಡೆಸುವ ಬಗ್ಗೆ ವರಿಷ್ಠರ ಬಳಿ ಅನುಮತಿ ಕೇಳಲು ನಿರ್ಧಾರ ಮಾಡಿದ್ದೇವೆ’ ಎಂದು ಹೇಳಿದರು.

ADVERTISEMENT

‘ಮೈಸೂರು ಚಲೋ’ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಹಮ್ಮಿಕೊಂಡ ಪಾದಯಾತ್ರೆ ಎಂದು ಯತ್ನಾಳ ಇತ್ತೀಚೆಗೆ ವ್ಯಂಗ್ಯವಾಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದೇ ಮುನಿಸಿಕೊಂಡಿದ್ದ ಪ್ರತಾಪಸಿಂಹ ಅವರು ಯತ್ನಾಳ ಜತೆ ಸೇರಿಕೊಂಡಿರುವುದು ಬಿಜೆಪಿಯಲ್ಲಿ ಹೊಸ ಬೆಳವಣಿಗೆ ಎಂದು ವ್ಯಾಖ್ಯಾನಿಸಲಾಗಿದೆ. 

ಈ ಕುರಿತು ‘ಎಕ್ಸ್‌’ ಮೂಲಕ ಪ್ರತಿಕ್ರಿಯಿಸಿರುವ ಪ್ರತಾಪಸಿಂಹ, ‘ಡಿಯರ್‌ ಮೀಡಿಯಾ, ನಿನ್ನೆ ನಡೆದಿದ್ದು, ಬಂಡಾಯ ಸಭೆಯಲ್ಲ. ಬಿಜೆಪಿ ಬಲವರ್ಧನೆಗಾಗಿ ಸಮಾನ ಮನಸ್ಕರ ಸಭೆ. ಕರ್ನಾಟಕದ ಜನಪ್ರಿಯ ಬಿಜೆಪಿಯ ನಾಯಕ ಯತ್ನಾಳ ಅವರ ನೇತೃತ್ವದಲ್ಲಿ ನಡೆದ ಸಭೆಯದು. ಪುನೀತ್ ಕೆರೆಹಳ್ಳಿ ಸೇರಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಒಗ್ಗಟ್ಟಾಗಿ ಬೆನ್ನಿಗೆ ನಿಲ್ಲಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.