ನವದೆಹಲಿ: ‘ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಒಪ್ಪಿಗೆ ಪಡೆದೇ ಆರ್.ರೋಷನ್ ಬೇಗ್ ಮಾಲೀಕತ್ವದ ಡ್ಯಾನಿಷ್ ಪಬ್ಲಿಕೇಷನ್ ಸಂಸ್ಥೆಗೆ ಬೆಂಗಳೂರಿನಲ್ಲಿ 10 ಸಾವಿರ ಚದರ ಅಡಿ ಜಾಗಕ್ಕೆ ಕ್ರಯಪತ್ರ ಮಾಡಿಕೊಡಲಾಗಿದೆ. ಇದು ನನ್ನೊಬ್ಬನ ತೀರ್ಮಾನ ಅಲ್ಲ’ ಎಂದು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೆ.ಜೈರಾಜ್ ತಿಳಿಸಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ರೋಷನ್ ಭೂ ಅಕ್ರಮಕ್ಕೆ ಜೈರಾಜ್ ಸಹಕಾರ’ ವರದಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಜಾಗಕ್ಕೆ ಕ್ರಯಪತ್ರ ಮಾಡಿಕೊಡುವ ಬಗ್ಗೆ ಕಂದಾಯ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದರು. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ಆಗಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆಗಿನ ಮಾರುಕಟ್ಟೆ ಮೌಲ್ಯಕ್ಕೆ ತಕ್ಕಂತೆ ದರ ನಿಗದಿ ಮಾಡಿ ಕ್ರಯಪತ್ರ ಮಾಡಿಕೊಡಲಾಗಿತ್ತು. ನಾನು ಅಕ್ರಮ ಎಸಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.