ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಶನಿವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿಯನ್ನು ಪುಣೆಯಲ್ಲಿ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ. ಅವರ ಪಾತ್ರದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.