ಬೆಂಗಳೂರು:ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗಿ, ನೀತಿಸಂಹಿತೆ ಜಾರಿಯಾದ ದಿನದಿಂದ ರಾಜ್ಯದಲ್ಲಿ ₹54 ಲಕ್ಷ ನಗದು ಹಾಗೂ ₹8.53 ಕೋಟಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದೇವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗದು ಮತ್ತು ಮದ್ಯದ ಜತೆಗೆ, 650 ಗ್ರಾಂ ಚಿನ್ನ ಮತ್ತು 40 ಕೆ.ಜಿ. ಬೆಳ್ಳಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾಗಿ ಎಎನ್‌ಐ ಟ್ವೀಟ್ ಮಾಡಿದೆ.
ಇದೇ ವೇಳೆ 1,818 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.
* ಇದನ್ನೂ ಓದಿ: 'ದಾಖಲೆ ಇಲ್ಲದೆ ₹ 50 ಸಾವಿರ ಕೊಂಡೊಯ್ದರೆ ತಾಪತ್ರಯ'
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.