ರಾಯಚೂರು:ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಪರಿವಾರದ ರಾಷ್ಟ್ರೀಯ ಪದಾಧಿಕಾರಿಗಳ ಬೈಠಕ್ಮಂತ್ರಾಲಯದ ಟಿಟಿಡಿ ಕಲ್ಯಾಣ ಮಂಟಪದಲ್ಲಿಶುಕ್ರವಾರ ಆರಂಭವಾಗಿದ್ದು, ಸೆಪ್ಟೆಂಬರ್ 2 ರವರೆಗೂ ನಡೆಯಲಿದೆ.
ಸರಸಂಘಚಾಲಕ ಮೋಹನ್ ಭಾಗವತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಸೇರಿದಂತೆ ಪರಿವಾರ ಸಂಘಟನೆಗಳ ಮುಖ್ಯಸ್ಥರು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.
ಭಾಗವತ್ ಅವರಿಗೆ ಝಡ್ ಪ್ಲಸ್ ಸೆಕ್ಯುರಿಟಿ ಇರುವುದರಿಂದ ಬೈಠಕ್ ನಡೆಯುವ ಕಲ್ಯಾಣ ಮಂಟಪ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳೀಯ ಆಂಧ್ರಪ್ರದೇಶ ಪೊಲೀಸರೂ ಬಂದೋಬಸ್ತ್‌ನಲ್ಲಿ ಇದ್ದಾರೆ.
ಮೂರು ದಿನಗಳಿಂದ ರಾಯಚೂರಿನಲ್ಲಿ ಉಳಿದುಕೊಂಡಿದ್ದ ಮೋಹನ್ ಭಾಗವತ್ ಅವರು ಗುರುವಾರ ರಾತ್ರಿ ಮಂತ್ರಾಲಯಕ್ಕೆ ಬಂದಿದ್ದು, ಶುಕ್ರವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿ ಮಠದ ದರ್ಶನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.