ಬೆಂಗಳೂರು: ನೆಮ್ಮದಿ ಕೇಂದ್ರ ಹಾಗೂ ಅಟಲ್ ಜೀ ಕೇಂದ್ರಗಳಲ್ಲಿ ನೀಡುತ್ತಿರುವ ಪಹಣಿ (ಆರ್‌ಟಿಸಿ) ಶುಲ್ಕವನ್ನು ₹10
ರಿಂದ ₹15ಕ್ಕೆ ಏರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಈಗ ₹15ಕ್ಕೆ ದೊರೆಯುತ್ತಿದ್ದ ದಾಖಲೆಗಳ ಬೆಲೆಯನ್ನು ₹25ಕ್ಕೆ ಹೆಚ್ಚಿಸಲಾಗಿದೆ. ಈ ದಾಖಲೆಗಳನ್ನು ಅಂಚೆ ಮುಖಾಂತರ ರೈತರಿಗೆ ತಲುಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಅಂಗಾಂಗ ಕಸಿ: ಬಡವರ ಅಂಗಾಂಗ ಕಸಿಗೆ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಇದಕ್ಕಾಗಿ ₹30 ಕೋಟಿ ನೀಡಲು ಒಪ್ಪಿಗೆ ನೀಡಿದೆ.
‘ಅಂಗಾಂಗ ಕಸಿ ಮಾಡಿಸಿಕೊಳ್ಳುವ ಬಡವರ ಸಂಖ್ಯೆ ಹೆಚ್ಚುತ್ತಿದೆ. ಅವರ ನೆರವಿಗೆ ಧಾವಿಸಲು ಸರ್ಕಾರ ನಿರ್ಧರಿಸಿದೆ. ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಬಂದ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗುತ್ತದೆ. ಚಿಕಿತ್ಸೆಯ ಬಹುತೇಕ ಮೊತ್ತವನ್ನು ಸರ್ಕಾರ ಭರಿಸಲಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.