ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ದಡಾರಲಸಿಕೆ ವ್ಯಾಪಕ ಪ್ರಮಾಣದಲ್ಲಿ ನೀಡಿದ್ದರೂ, ದಡಾರ ಪ್ರಕರಣ
ಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಕಳೆದ ತಿಂಗಳು ದಡಾರ ಕಾಣಿಸಿಕೊಂಡಾಗ ಅದನ್ನು ಹತೋಟಿಗೆ ತರುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಯಿತು. ದಡಾರ ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ ಪ್ರತಿರೋಧಕ ನೀಡುವ ಬಗ್ಗೆಯೂ ಆರೋಗ್ಯ ಇಲಾಖೆ ಗಂಭೀರ ಚಿಂತನೆ ನಡೆಸಿದೆ.
ಕಲಬುರ್ಗಿಯಲ್ಲಿ ದಡಾರದಿಂದ ಬಾಲಕಿಯ ಸಾವು ಸಂಭವಿಸಿದಾಗ ರಾಜ್ಯದಲ್ಲಿ ಗಂಭೀರ ಸ್ಥಿತಿ ಉದ್ಭವಿಸಿರುವ ಸುಳಿವು ಸಿಕ್ಕಿತು. ಇದರ ಬೆನ್ನಲ್ಲೇ 49 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತು. ‘ಸೋಂಕಿತರೆಲ್ಲರೂ ಈಗ ಗುಣಮುಖರಾಗಿದ್ದಾರೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಟಿ.ಎಸ್.ಪ್ರಭಾಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.