ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ನೀಡಲಾಗಿದೆ. ಆ ನಿವೇಶನದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು.
ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ನಿರ್ಮಿಸಲು ಅನುದಾನ ಹಾಗೂ ಅವರ ಗ್ರಾಮ ಬಳ್ಳೂರು ಅಭಿವೃದ್ಧಿಗೆ ₹ 2 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.