ADVERTISEMENT

ರಾಯಣ್ಣ ಜನುಮ ದಿನ; ಮುಂದಿನ ಬಾರಿ ಅದ್ದೂರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 15:12 IST
Last Updated 15 ಆಗಸ್ಟ್ 2024, 15:12 IST
<div class="paragraphs"><p>ಮೆಜೆಸ್ಟಿಕ್‌ ಸಮೀಪದ ದೇವರಾಜ ಅರಸು ವೃತ್ತದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಾಲಾರ್ಪಣೆ ಮಾಡಿದರು</p></div>

ಮೆಜೆಸ್ಟಿಕ್‌ ಸಮೀಪದ ದೇವರಾಜ ಅರಸು ವೃತ್ತದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಾಲಾರ್ಪಣೆ ಮಾಡಿದರು

   

–ಪ್ರಜಾವಾಣಿ ಚಿತ್ರ/ಕಿಶೋರ್ ಕುಮಾರ್ ಬೋಳಾರ್

ಬೆಂಗಳೂರು: ಬ್ರಿಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ಸಂಗೊಳ್ಳಿ ರಾಯಣ್ಣ ಜನಿಸಿದ ದಿನವೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ಮುಂದಿನ ವರ್ಷದಿಂದ ಅವರ ಜನುಮ ದಿನವನ್ನು ರವಿಂದ್ರ ಕಲಾಕ್ಷೇತ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೆಜೆಸ್ಟಿಕ್‌ ಸಮೀಪದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಯಣ್ಣ ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದ ದಿನವೇ ಸಂವಿಧಾನ ಜಾರಿಯಾಗಿದೆ. ಹಾಗಾಗಿ, ಗಣರಾಜ್ಯೋತ್ಸವದ ದಿನ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಕಿತ್ತೂರು ಚೆನ್ನಮ್ಮ ಅವರ ಸಾಮಾನ್ಯ ಸೈನಿಕರಾಗಿದ್ದ ಅವರು ಬ್ರಿಟಿಷರ ವಿರುದ್ಧ ದಿಟ್ಟ ಹೋರಾಟ ಮಾಡಿದ್ದರು. ಆಲದ ಮರಕ್ಕೆ ರಾಯಣ್ಣ ಅವರನ್ನು ನೇಣುಹಾಕಲಾಯಿತು. ಮಹಾನ್‌ ರಾಷ್ಟ್ರಪ್ರೇಮಿ. ಅವರ ಬದುಕು ನಮಗೆಲ್ಲರಿಗೂ ಸ್ಪೂರ್ತಿ ಎಂದರು.

ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.