ಬೆಂಗಳೂರು: ಕೊರೊನಾ ಸೋಂಕು ತಡೆಗೆ ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಖಾಸಗಿ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 100 ಮಂದಿ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಅದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಸೇರಿದ್ದರು. ಹಲವರು ಮಾಸ್ಕ್ ಧರಿಸಿರಲಿಲ್ಲ. ಅಂತರವನ್ನೂ ಕಾಯ್ದುಕೊಂಡಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.