ರಾಯಚೂರು: ’ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ತಯಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ಆಯೋಗವು ಪ್ರಧಾನಮಂತ್ರಿ ಕೈಯಲ್ಲಿದ್ದು, ಮುಂದಿನ ದಿನಗಳಲ್ಲಿ ದ್ವೇಷ ಬಿತ್ತುವ ಶಿಕ್ಷಣ ಬರುವ ಆತಂಕ ಕಾಡುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಸಸಿಕಾಂತ್ ಸೆಂಥಿಲ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮುಂದುವರಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಶಿಕ್ಷಣ ನೀತಿಯಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಐದು ಹಾಗೂ ಏಳನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.
‘ಅಧಿಕಾರಿಯಾಗಿ ಕಾನೂನು ವಿರೋಧಿಸುವುದು ತಪ್ಪಾಗುತ್ತದೆ. ಈಗ ಅಧಿಕಾರದಿಂದ ಹೊರಬಂದು ಮಾತನಾಡುತ್ತಿದ್ದೇನೆ. ದೇಶದಲ್ಲಿ ಸ್ಥಿತಿ ಸರಿಯಿಲ್ಲ ಎಂದು ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದರು.
‘ನನ್ನ ರಾಜೀನಾಮೆ ಅಂಗೀಕರಿಸುವುದು ಸರ್ಕಾರಕ್ಕೆ ಬಿಟ್ಟಿರುವ ನಿರ್ಧಾರ. ನಾನು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿದ್ದು, ರಾಜೀನಾಮೆ ಹಿಂಪಡೆಯುವ ಬಗ್ಗೆ ಯಾವುದೇ ಮಾತುಕತೆ ಮಾಡಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.