ಬೆಂಗಳೂರು: ‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಮುಂದಾಗಬೇಕು’ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಕೇಶವಮೂರ್ತಿ ಹೇಳಿದ್ದಾರೆ.
‘ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಐತಿಹಾಸಿಕ. ಪರಿಶಿಷ್ಟ ಜಾತಿಗಳಲ್ಲಿನ ಎಲ್ಲ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯವನ್ನು ಆಧರಿಸಿ ಮರು ವರ್ಗೀಕರಣ ಮಾಡಬೇಕು. ಜತೆಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಈ ಸಮುದಾಯಗಳ ಪ್ರಾತಿನಿಧ್ಯ ಎಷ್ಟಿದೆ ಎಂಬುದನ್ನು ಪರಿಗಣಿಸಬೇಕು. ಈ ಸಂಬಂಧ ದತ್ತಾಂಶವನ್ನು ಸಂಗ್ರಹಿಸಿ, ವಿಸ್ತೃತ ಅಧ್ಯಯನ ನಡೆಸಬೇಕು. ಆನಂತರವೇ ಮರು ವರ್ಗೀಕರಣ ಮಾಡಬೇಕು’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.