ಬೆಂಗಳೂರು: ರಂಜಾನ್ ಉಪವಾಸ ಮಾರ್ಚ್ 11ರಿಂದ ಆರಂಭವಾಗುತ್ತಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ರಂಜಾನ್‌ನ ಒಂದು ತಿಂಗಳು ಪ್ರತಿ ದಿನ ಉರ್ದು ಶಾಲೆಗಳು ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ವರೆಗೆ ನಡೆಯಲಿವೆ. ಒಂದು ತಿಂಗಳು ಕಡಿತವಾಗುವ ಶಾಲಾ ಸಮಯವನ್ನು ಮುಂದಿನ ರಜಾ ದಿನಗಳಲ್ಲಿ ವಿಶೇಷ ತರಗತಿ ನಡೆಸುವ ಮೂಲಕ ಸರಿದೂಗಿಸಲು, ಇತರೆ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿನ ಮುಸ್ಲಿಂ ವಿದ್ಯಾರ್ಥಿಗಳಿಗೆ ಶಾಲಾ ಸಮಯಕ್ಕೂ ಅರ್ಧ ಗಂಟೆ ಮುಂಚಿತವಾಗಿ ಮನೆಗಳಿಗೆ ತೆರಳಲು ಅವಕಾಶ ಮಾಡಿಕೊಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.