ADVERTISEMENT

ಎಸ್‌ಸಿಎಸ್‌ಟಿ ಆಯೋಗ ನ್ಯಾಯಾಂಗದ ಪಾತ್ರ ವಹಿಸಲು ಆಗದು: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 20:18 IST
Last Updated 24 ಡಿಸೆಂಬರ್ 2020, 20:18 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವನ್ನು ನ್ಯಾಯಮಂಡಳಿ ಅಥವಾ ನ್ಯಾಯಾಂಗದ ಪಾತ್ರ ನಿರ್ವಹಿಸುವ ವೇದಿಕೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ನೌಕರರ ನಡುವೆ ಈ ವಿವಾದವಿತ್ತು. ಎಂ.ಬಿ.ಸಿದ್ದಲಿಂಗಸ್ವಾಮಿ ಅವರು ಅಧೀಕ್ಷಕರಾಗಿ 2012ರಲ್ಲಿ ಬಡ್ತಿ ಹೊಂದಿದ್ದರು. ಕೆ.ಆರ್‌.ಮುರುಳೀಧರ್ ಅವರು 2015ರಲ್ಲಿ ಬಡ್ತಿ ಹೊಂದಿದ್ದರು.

ಮುರುಳೀಧರ್ ಅವರು ಎಸ್‌ಸಿಎಸ್‌ಟಿ ಆಯೋಗಕ್ಕೆ ಅರ್ಜಿ ಸಲ್ಲಿಸಿ ಸಿದ್ದಲಿಂಗಸ್ವಾಮಿ ಅವರಿಗಿಂತ ಸೇವಾ ಹಿರಿತನ ಇರುವ ಕಾರಣ ಎಲ್ಲಾ ಸೌಲಭ್ಯಗಳನ್ನು ಕೊಡಿಸಬೇಕು ಎಂದು ಕೋರಿದ್ದರು. ‘2012 ರಿಂದ ಜಾರಿಗೆ ಬರುವಂತೆ ಸೌಲಭ್ಯಗಳನ್ನು ಒದಗಿಸಬೇಕು’ ಎಂದು 2016ರಲ್ಲಿ ಆಯೋಗ ಆದೇಶ ಹೊರಡಿಸಿತ್ತು.

ADVERTISEMENT

‘ಮುರುಳೀಧರ್ ಅವರು ರಾಜ್ಯ ಆಡಳಿತ ನ್ಯಾಯಮಂಡಳಿಗೆ(ಕೆಎಟಿ) ಅರ್ಜಿ ಸಲ್ಲಿಸಬೇಕಿತ್ತು’ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಕೊಂದುಕೊರತೆಗಳನ್ನು ಪರಿಹರಿಸುವುದು ಆಯೋಗದ ಕರ್ತವ್ಯ’ ಎಂದು ಆಯೋಗದ ಪರ ವಕೀಲರು ಸ್ಪಷ್ಟಪಡಿಸಿದರು.

‘ಆಯೋಗವು ನ್ಯಾಯಮಂಡಳಿ ಅಥವಾ ನ್ಯಾಯಾಲಯದ ಕಾರ್ಯಗಳನ್ನು ನಿರ್ವಹಿಸುವ ವೇದಿಕೆಯಾಗಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.