ADVERTISEMENT

ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದಿದ್ದಾರೆ: ದೇವೇಗೌಡ ನಡೆಗೆ ಸಿದ್ದರಾಮಯ್ಯ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2024, 12:47 IST
Last Updated 23 ಮೇ 2024, 12:47 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಎಚ್.ಡಿ. ದೇವೇಗೌಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಟೀಕಿಸಿದರು.

ADVERTISEMENT

ಮೈಸೂರು ತಾಲ್ಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಕುಡಿದು ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ವರದಿ ಕೊಟ್ಟಿದ್ದಾರೆ‌. ಅದರ ಆಧಾರದ ಮೇಲೆ ಈ ಕ್ರಮ ಕೈಗೊಂಡಿದ್ದೇವೆ‌ ಎಂದು ತಿಳಿಸಿದರು.

ಇನ್ನು ಮುಂದೆ, ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛ ಮಾಡಿಸಬೇಕು ಎಂದು ಆದೇಶಿಸಿದ್ದೇನೆ ಎಂದರು.

ಈ ಪ್ರಕರಣದಲ್ಲಿ ಕಲುಷಿತ ನೀರು ಸರಬರಾಜು ಆಗಿದೆ. ಅದನ್ನ ಯಾರೂ ಪರೀಕ್ಷೆಯನ್ನೇ ಮಾಡಿಲ್ಲ. ಹೀಗಾಗಿ ಈ ಘಟನೆ ನಡೆದಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.