ಬೆಂಗಳೂರು: ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲೂ ಪ್ರಭುತ್ವ ಹೊಂದಿದ್ದ ಹಿರಿಯ ಸಾಹಿತಿ, ವಿಮರ್ಶಕ ಪ್ರೊ.ಎಲ್.ಎಸ್.ಶೇಷಗಿರಿ ರಾವ್ (95) ದೀರ್ಘಕಾಲದ ಅನಾರೋಗ್ಯದಿಂದ ಶುಕ್ರವಾರ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
ಲಕ್ಷ್ಮೇಶ್ವರ ಸ್ವಾಮಿರಾವ್, ಕಮಲಾಬಾಯಿ ದಂಪತಿಗೆ 1925ರ ಫೆಬ್ರುವರಿ 16ರಂದು ಜನಿಸಿದ ಶೇಷಗಿರಿ ರಾವ್,ಬೆಂಗಳೂರು, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿ, ನಾಗಪುರ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಎಂ.ಎ ಪದವಿ ಗಳಿಸಿದರು.ಕೋಲಾರ, ಮಡಿಕೇರಿ, ಬೆಂಗಳೂರಿನಲ್ಲಿ ಕಾಲೇಜು ಉಪನ್ಯಾಸಕರಾಗಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿದ್ದ ಅವರು 1947–50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ, ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಬುಕ್ ಟ್ರಸ್ಟ್ ಸೇರಿದಂತೆ ಹಲವು ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ್ದರು.2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ಬಿಎಂಶ್ರೀಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಕೃತಿಗಳು:ಇಂಗ್ಲಿಷ್ ಸಾಹಿತ್ಯದ ಮೇರು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದು ಶೇಷಗಿರಿ ರಾವ್ ಅವರ ಹೆಗ್ಗಳಿಕೆ. ‘ಆಲಿವರ್ ಗೋಲ್ಡ್‌ಸ್ಮಿತ್’, ‘ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ’, ‘ಪಾಶ್ಚಾತ್ಯ ಸಾಹಿತ್ಯ ವಿಹಾರ’, ‘ಸಾಹಿತ್ಯ ವಿಶ್ಲೇಷಣೆ’, ‘ಇಂಗ್ಲಿಷ್ ಸಾಹಿತ್ಯ ಚರಿತ್ರೆ’,‘ಹೊಸಗನ್ನಡ ಸಾಹಿತ್ಯ’, ಗ್ರೀಕ್ ರಂಗಭೂಮಿ ಮತ್ತು ನಾಟಕ’ ಪ್ರಮುಖ ಕೃತಿಗಳು. ‘ಸಾಮಾನ್ಯ ಮನುಷ್ಯ’ ಕಾದಂಬರಿ. ‘ಇದು ಜೀವನ’, ‘ಜಂಗಮ ಜಾತ್ರೆಯಲ್ಲಿ’, ‘ಮುಟ್ಟಿದ ಗುರಿ ಮತ್ತು ಇತರ ಕಥೆಗಳು’, ‘ಮುಯ್ಯಿ’ ಕಥಾಸಂಕಲನಗಳು. ಹಂಪಿ ವಿಶ್ವವಿದ್ಯಾಲಯಕ್ಕೆ ಇಂಗ್ಲಿಷ್–ಕನ್ನಡ, ಕನ್ನಡ– ಕನ್ನಡನಿಘಂಟು ರಚಿಸಿಕೊಟ್ಟಿದ್ದಾರೆ.‘ಮುಯ್ಯಿ’ಕಥೆ ಆಧರಿಸಿದ ಚಲನಚಿತ್ರ 1978ರಲ್ಲಿ ತೆರೆ ಕಂಡಿತ್ತು.
ಕೋಲಾರ, ಮಡಿಕೇರಿ, ಬೆಂಗಳೂರಿನಲ್ಲಿ ಕಾಲೇಜು ಉಪನ್ಯಾಸಕರಾಗಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.
ಸೇವೆ, ಪ್ರಶಸ್ತಿ: ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿದ್ದ ಅವರು 1947–50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ, ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಬುಕ್ ಟ್ರಸ್ಟ್ ಸೇರಿದಂತೆ ಹಲವು ಸಮಿತಿಗಳಲ್ಲಿ ಕಾರ್ಯ
ನಿರ್ವಹಿಸಿದ್ದರು.2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ಬಿಎಂಶ್ರೀಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪಡೆದಿದ್ದಾರೆ.
ಕೃತಿಗಳು:ಇಂಗ್ಲಿಷ್ ಸಾಹಿತ್ಯದ ಮೇರು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದು ಶೇಷಗಿರಿ ರಾವ್ ಅವರ ಹೆಗ್ಗಳಿಕೆ. ‘ಆಲಿವರ್ ಗೋಲ್ಡ್‌ಸ್ಮಿತ್’, ‘ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ’, ‘ಪಾಶ್ಚಾತ್ಯ ಸಾಹಿತ್ಯ ವಿಹಾರ’, ‘ಸಾಹಿತ್ಯ ವಿಶ್ಲೇಷಣೆ’, ‘ಇಂಗ್ಲಿಷ್ ಸಾಹಿತ್ಯ ಚರಿತ್ರೆ’, ‘ಹೊಸಗನ್ನಡ ಸಾಹಿತ್ಯ’, ಗ್ರೀಕ್ ರಂಗಭೂಮಿ ಮತ್ತು ನಾಟಕ’ ಪ್ರಮುಖ ಕೃತಿಗಳು. ‘ಸಾಮಾನ್ಯ ಮನುಷ್ಯ’ ಕಾದಂಬರಿ. ‘ಇದು ಜೀವನ’, ‘ಜಂಗಮ ಜಾತ್ರೆಯಲ್ಲಿ’, ‘ಮುಟ್ಟಿದ ಗುರಿ ಮತ್ತು ಇತರ ಕಥೆಗಳು’, ‘ಮುಯ್ಯಿ’ಕಥಾಸಂಕಲನಗಳು. ಹಂಪಿ ವಿಶ್ವವಿದ್ಯಾಲಯಕ್ಕೆ ಇಂಗ್ಲಿಷ್–ಕನ್ನಡ, ಕನ್ನಡ– ಕನ್ನಡನಿಘಂಟು ರಚಿಸಿಕೊಟ್ಟಿದ್ದಾರೆ.‘ಮುಯ್ಯಿ’ಕಥೆ ಆಧರಿಸಿದ ಚಲನಚಿತ್ರ 1978ರಲ್ಲಿ ತೆರೆ ಕಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.