ಉಡುಪಿ: ಪರ್ಯಾಯದ ಅಂಗವಾಗಿ ನಡೆದ ಪುತ್ತಿಗೆ ಮಠದ ಶ್ರೀಗಳ ಶೋಭಾಯಾತ್ರೆಯಲ್ಲಿ ಸಪ್ತ ಮಠಗಳ ಮಠಾಧೀಶರು ಪಾಲ್ಗೊಂಡಿರಲಿಲ್ಲ.
ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿ ಅಲ್ಲಿಂದ ಕೃಷ್ಣ ಮಠದವರೆಗೆ ನಡೆಯುವ ಶೋಭಾಯಾತ್ರೆಯಲ್ಲಿ ಉಡುಪಿಯ ಕೃಷ್ಣಮಠಕ್ಕೆ ಸಂಬಂಧಿಸಿದ ಎಲ್ಲ ಅಷ್ಟ ಮಠಗಳ ಮಠಾಧೀಶರು ಪಾಲ್ಗೊಳ್ಳುವುದು ವಾಡಿಕೆ. ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಅವರನ್ನು ಶೋಭಾಯಾತ್ರೆಯಲ್ಲಿ ಕರೆತರುವುದು ಸಂಪ್ರದಾಯ. ಆದರೆ, ಯಾತ್ರೆಯಲ್ಲಿ ಪುತ್ತಿಗೆ ಶ್ರೀ ಮತ್ತು ಅವರ ಕಿರಿಯ ಶ್ರೀ ಮಾತ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.