ADVERTISEMENT

ಏಳನೇ ವೇತನ ಆಯೋಗದ ವೇತನ ಪರಿಷ್ಕರಣೆ: ಅಧಿಕೃತ ಆದೇಶ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 16:03 IST
Last Updated 22 ಜುಲೈ 2024, 16:03 IST
<div class="paragraphs"><p>ಹಣ </p></div>

ಹಣ

   

ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸಿನಂತೆ ಆ.1ರಿಂದ ಪರಿಷ್ಕೃತ ಪರಿಷ್ಕೃತ ವೇತನ ಶ್ರೇಣಿ ಜಾರಿ ಗೊಳಿಸಲು ಆರ್ಥಿಕ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಇದೇ ಜುಲೈ15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. 

ADVERTISEMENT

ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೈಗೊಂಡಿತ್ತು. ಬಾಕಿ ಉಳಿದಿರುವ ಶೇ 10.50ರಷ್ಟು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು.

ವೇತನ ಪರಿಷ್ಕರಣೆಯಿಂದಾಗಿ ಸರ್ಕಾರಕ್ಕೆ ₹20 ಸಾವಿರ ಕೋಟಿ ಹೆಚ್ಚುವರಿ ಹೊರೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.