ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, ಸೋಮವಾರ ಸಂಜೆ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.
ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು, ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ನಂತರ ಪ್ರಜ್ವಲ್ ಅವರನ್ನು ನ್ಯಾಯಾಲಯದಿಂದ ನೇರವಾಗಿ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.