ADVERTISEMENT

ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಾಸಕ ಎಚ್.ಡಿ. ರೇವಣ್ಣ ಪರ ವಕೀಲರು ವಾಪಸು ಪಡೆದಿದ್ದಾರೆ.

​ಪ್ರಜಾವಾಣಿ ವಾರ್ತೆ
Published 3 ಮೇ 2024, 7:19 IST
Last Updated 3 ಮೇ 2024, 7:19 IST
ಎಚ್.ಡಿ. ರೇವಣ್ಣ
ಎಚ್.ಡಿ. ರೇವಣ್ಣ   

ಬೆಂಗಳೂರು: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಾಸಕ ಎಚ್.ಡಿ. ರೇವಣ್ಣ ಪರ ವಕೀಲರು ವಾಪಸು ಪಡೆದಿದ್ದಾರೆ.

ಈ ಕುರಿತಂತೆ ಎಚ್‌.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಎಸ್ಐಟಿ ಪರ ಹಾಜರಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್‌ಜಗದೀಶ್, "ಎಚ್.ಡಿ.ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 376 (ಅತ್ಯಾಚಾರ ಆರೋಪ) ಅನ್ನು ಸೇರ್ಪಡೆ ಮಾಡಿಲ್ಲ. ಅತ್ಯಾಚಾರದ ಆರೋಪ ಇಲ್ಲದಿರುವ ಕಾರಣ ನಿರೀಕ್ಷಣಾ ಜಾಮೀನು ಕೋರಿಕೆಯ ಅರ್ಜಿ ವಿಚಾರಣೆ ಅಗತ್ಯವಿಲ್ಲ. ಆರೋಪಿಗೆ ಜಾಮೀನು ನೀಡಬಹುದಾದ ಆರೋಪಗಳು ಮಾತ್ರವಿದೆ" ಎಂದರು.

ADVERTISEMENT

ಎಸ್ಐಟಿಯ ಈ ಹೇಳಿಕೆ ಹಿನ್ನೆಲೆಯಲ್ಲಿ ಎಚ್.ಡಿ.ರೇವಣ್ಣ ಪರ ಹಾಜರಿದ್ದ ಹೈಕೋರ್ಟ್ ಹಿರಿಯ ವಕೀಲ ಮೂರ್ತಿ ಡಿ.ನಾಯಕ್ ಅವರು ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿಯನ್ನು ವಾಪಸು ಪಡೆದರು. ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.