ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರನೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಕುರಿತ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಜಾಗೊಳಿಸಿ ಆದೇಶಿಸಿದರು.
ಈ ಹಿಂದೆ ಇದೇ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಇವುಗಳಲ್ಲಿ ಒಂದು ರೆಗ್ಯುಲರ್ ಜಾಮೀನು ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.