ADVERTISEMENT

ಬಾಲಕಿ‌ ಮೇಲೆ ಲೈಂಗಿಕ‌ ದೌರ್ಜನ್ಯ: ನಿವೃತ್ತ PSI ಬಂಧನ, POCSO ಕಾಯ್ದೆಯಡಿ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2023, 8:58 IST
Last Updated 15 ಆಗಸ್ಟ್ 2023, 8:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

'ಕೃತ್ಯದ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ‌ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದರು.

'ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಅಬ್ದುಲ್ ಹಫೀಜ್‌ನನ್ನು ಬಂಧಿಸಲಾಗಿದೆ. ಬಾಲಕಿ ಹಾಗೂ ಆರೋಪಿಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬರಬೇಕಿದೆ. ಕೃತ್ಯದ ಸಂಬಂಧ ಬಾಲಕಿಯಿಂದಲೂ ಹೇಳಿಕೆ ಪಡೆಯಲಾಗಿದೆ' ಎಂದು ಹೇಳಿದರು.

ADVERTISEMENT
ಆರೋಪಿ ಅಬ್ದುಲ್‌ ಹಫೀಜ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.