ಬೆಂಗಳೂರು: ರಾಜ್ಯ ಸರ್ಕಾರದ ಮುಂದಿನ ಮುಖ್ಯಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಶಾಲಿನಿ ಅವರ ಪತಿಯೂ ಆಗಿರುವ ಹಾಲಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಅಧಿಕಾರ ಅವಧಿ ಇದೇ ತಿಂಗಳ 31ಕ್ಕೆ ಮುಕ್ತಾಯವಾಗಲಿದೆ. ಅದೇ ದಿನ, ಶಾಲಿನಿ ರಜನೀಶ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಸದ್ಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಎರಡೂವರೆ ವರ್ಷ ಈ ಹುದ್ದೆಯಲ್ಲಿರಲಿದ್ದಾರೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಜನೀಶ್ ಗೋಯಲ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.