ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಹಾಗೂ ನರ ಶಸ್ತ್ರಚಿಕಿತ್ಸಕರಾಗಿರುವ ಅವರ ಸಹೋದರ ಡಾ.ಎಸ್.ಪಿ. ಬಳಿಗಾರ್ ಅವರು ಕರ್ನಾಟಕ ಲೇಖಕಿಯರ ಸಂಘದಲ್ಲಿ ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.
ಪ್ರತಿ ವರ್ಷ ಮೂರು ಪ್ರಶಸ್ತಿಗಳನ್ನು ನೀಡಲು ಅವರು ನಿರ್ಧರಿಸಿದ್ದಾರೆ. ಈ ಸಂಬಂಧ ₹5,00,200 ದತ್ತಿ ಮೊತ್ತ ಇರಿಸಿದ್ದಾರೆ. ಗದ್ಯ ಸಾಹಿತ್ಯ, ಕಾವ್ಯ ಪ್ರಕಾರ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಶಸ್ತಿ ಸ್ಥಾಪಿಸಲು ನಿರ್ಧರಿಸಲಾಗಿದೆ.
50 ವರ್ಷ ಮೇಲ್ಪಟ್ಟ ಸಾಧಕರನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಒಳಗೊಂಡಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.