ಸಾಗರ: ‘ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಚನೆ ಸರ್ಕಾರಕ್ಕೆ ಬಂದಿರುವುದು ತುಘಲಕ್ ದರ್ಬಾರ್‌ನ ಸಂಕೇತವಾಗಿದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀ ಟೀಕಿಸಿದ್ದಾರೆ.
ಇಲ್ಲಿನ ರಾಘವೇಶ್ವರ ಭಾರತೀ ಸಭಾಭವನದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾ ಪೀಠದ ಮಾರ್ಗದರ್ಶನ ಸಭೆಯಲ್ಲಿ ಮಾತನಾಡಿದ ಅವರು, ‘ಶರಾವತಿ ಯೋಜನೆಗೆ ಶ್ರೀಮಠದ ವಿರೋಧವಿದೆ. ಸರ್ಕಾರ ಈ ದಿಕ್ಕಿನಲ್ಲಿ ಒಂದು ಹೆಜ್ಜೆ ಮುಂದಿಟ್ಟರೆ ಶ್ರೀ ಮಠದ ಕಾರ್ಯಕರ್ತರು ಅದನ್ನು ವಿರೋಧಿಸಲು ನೂರು ಹೆಜ್ಜೆ ಮುಂದಿಡುತ್ತಾರೆ’ ಎಂದು ಎಚ್ಚರಿಸಿದರು.
‘ಆಯಾ ಭಾಗದ ಸಂಪನ್ಮೂಲಗಳು ಆಯಾ ಭಾಗದಲ್ಲೇ ಸದ್ಬಳಕೆಯಾಗಬೇಕು. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದು ಎಂದರೆ ನಿಸರ್ಗದ ಮೇಲೆ ದೌರ್ಜನ್ಯ ನಡೆಸಿದಂತೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.