ADVERTISEMENT

ಶಿಗ್ಗಾವಿ ಉಪ ಚುನಾವಣೆ: ಕಾಂಗ್ರೆಸ್‌ ವಿರುದ್ಧ ಖಾದ್ರಿ ಬಂಡಾಯ– ನಾಮಪತ್ರ ಸಲ್ಲಿಕೆ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 9:52 IST
Last Updated 25 ಅಕ್ಟೋಬರ್ 2024, 9:52 IST
<div class="paragraphs"><p>ಶಿಗ್ಗಾವಿ ತಾಲ್ಲೂಕಿನ ಹುಲಗೂರು ಗ್ರಾಮದಲ್ಲಿ ಸೈಯದ್ ಅಜ್ಜಂಪೀರ ಖಾದ್ರಿ ಅವರು ಬೆಂಬಲಿಗರ ಸಭೆ ನಡೆಸಿದರು</p></div>

ಶಿಗ್ಗಾವಿ ತಾಲ್ಲೂಕಿನ ಹುಲಗೂರು ಗ್ರಾಮದಲ್ಲಿ ಸೈಯದ್ ಅಜ್ಜಂಪೀರ ಖಾದ್ರಿ ಅವರು ಬೆಂಬಲಿಗರ ಸಭೆ ನಡೆಸಿದರು

   

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಖಾದ್ರಿ, ತಮಗೆ ಟಿಕೆಟ್ ಸಿಗುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ಸಿಕ್ಕಿದೆ.

ADVERTISEMENT

ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಖಾದ್ರಿ, ಕ್ಷೇತ್ರದಲ್ಲಿರುವ ತಮ್ಮ ಬೆಂಬಲಿಗರ ಜೊತೆ ಶುಕ್ರವಾರ ಸಭೆ ನಡೆಸಿದರು.

'ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ. ನಾಮಪತ್ರ ಸಲ್ಲಿಸದಿದ್ದರೆ ನಿಮ್ಮ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ' ಎಂದು ಬೆಂಬಲಿಗರು ಹೇಳಿದ್ದರು.

ಇದಕ್ಕೆ‌ ಒಪ್ಪಿದ ಖಾದ್ರಿ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಪ್ಪಿಕೊಂಡಿದ್ದಾರೆ.

ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದ ಖಾದ್ರಿ ಬೆಂಬಲಿಗರು, ನಾಮಪತ್ರ ಸಲ್ಲಿಸಿದರು.

ಕ್ಷೇತ್ರದಲ್ಲಿ‌ ಒಂದು ಬಾರಿ ಶಾಸಕರಾಗಿದ್ದ ಖಾದ್ರಿ ಅವರು ತಮ್ಮದೇ ಬೆಂಬಲಿಗರ ಪಡೆ ಹೊಂದಿದ್ದಾರೆ. ಇವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವುದರಿಂದ, ಕಾಂಗ್ರೆಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಹಿನ್ನೆಡೆ ಉಂಟಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.