ADVERTISEMENT

Shiggaon By Election: ಯಾಸೀರ್‌ಅಹ್ಮದ್‌ ಖಾನ್ ಪಠಾಣಗೆ ಕಾಂಗ್ರೆಸ್‌ ಟಿಕೆಟ್

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 12:31 IST
Last Updated 24 ಅಕ್ಟೋಬರ್ 2024, 12:31 IST
<div class="paragraphs"><p>ಯಾಸೀರ್‌ಅಹ್ಮದ್‌ ಖಾನ್ </p></div>

ಯಾಸೀರ್‌ಅಹ್ಮದ್‌ ಖಾನ್

   

- ಪ್ರಜಾವಾಣಿ ಚಿತ್ರ

ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಯಾಸೀರ್‌ಅಹ್ಮದ್ ಖಾನ್ ಪಠಾಣ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.

ADVERTISEMENT

2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿದ್ದ ಯಾಸೀರ್‌ಅಹ್ಮದ್ ಖಾನ್ ಪಠಾಣ ಅವರು ಸೋಲು ಅನುಭವಿಸಿದ್ದರು. ಈ ಬಾರಿಯೂ ಟಿಕಟ್‌ಗಾಗಿ ಪ್ರಯತ್ನಿಸಿದ್ದರು.

ಅಲ್ಪಸಂಖ್ಯಾತರು ಅಥವಾ ಲಿಂಗಾಯತ ಸಮುಯದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿದ್ದವು. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಡಗಳು ಹೆಚ್ಚಿದ್ದವು. ಇದೇ ಕಾರಣಕ್ಕೆ ಈ ಬಾರಿಯೂ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ನೀಡಲಾಗಿದೆ.

ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ಪಠಾಣ ಶಿಗ್ಗಾವಿ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರು. ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಅವರಿಗೆ ಟಿಕೆಟ್ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.