ADVERTISEMENT

ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್‌ನಿಂದ ಗಡ್ಡದೇವರ ಮಠ ಕಣಕ್ಕಿಳಿಸಲು ಚರ್ಚೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 20:32 IST
Last Updated 27 ಜೂನ್ 2024, 20:32 IST
ಆನಂದಸ್ವಾಮಿ ಗಡ್ಡದೇವರಮಠ
ಆನಂದಸ್ವಾಮಿ ಗಡ್ಡದೇವರಮಠ   

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆನಂದ ಗಡ್ಡದೇವರಮಠ ಅವರನ್ನು ಕಣಕ್ಕೆ ಇಳಿಸುವ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಗುರುವಾರ ಚರ್ಚೆ ನಡೆದಿದೆ.

ಶಿಗ್ಗಾವಿ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ನಂತರ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆನಂದ ಗಡ್ಡದೇವರ ಮಠ ಅವರು ಬಿಜೆಪಿಯ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಸೋತಿದ್ದರು. ಈಗ ಅವರನ್ನೇ ಶಿಗ್ಗಾವಿಯಿಂದ ಕಣಕ್ಕೆ ಇಳಿಸುವ ಕುರಿತು ಚರ್ಚೆ ನಡೆದಿದೆ.

ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ, ಪ್ರಕಾಶ್‌ ಕೋಳಿವಾಡ, ಯು.ಬಿ. ಬಣಕಾರ್‌, ಶ್ರೀನಿವಾಸ ಮಾನೆ, ರುದ್ರಪ್ಪ ಲಮಾಣಿ, ಆನಂದ ಗಡ್ಡದೇವರಮಠ ಅವರು ಮಾತುಕತೆ ನಡೆಸಿದರು.

ADVERTISEMENT

ಹಿಂದೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನ ಮರದ ಅವರೂ ಪ್ರಬಲ ಆಕಾಂಕ್ಷಿಯಾಗಿದ್ದು, ಅವರನ್ನು ಕಣಕ್ಕೆ ಇಳಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಾಂಗ್ರೆಸ್‌ ಕಣಕ್ಕೆ ಇಳಿಸಿತ್ತು. ಈ ಬಾರಿಯೂ ತಮ್ಮ ಸಮುದಾಯದವರಿಗೆ ಟಿಕೆಟ್‌ ನೀಡಬೇಕು ಎಂದು ಮುಸ್ಲಿಂ ನಾಯಕರು ಕೋರಿಕೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.