ADVERTISEMENT

ಖಟ್ಟರ್ ಭೇಟಿಯಾದ ಶಿವಕುಮಾರ್: ಸಂಚಾರ ದಟ್ಟಣೆ, ಘನತ್ಯಾಜ್ಯ ನಿರ್ವಹಣೆ ಬಗ್ಗೆ ಚರ್ಚೆ

ಪಿಟಿಐ
Published 31 ಜುಲೈ 2024, 13:51 IST
Last Updated 31 ಜುಲೈ 2024, 13:51 IST
<div class="paragraphs"><p>ಡಿ. ಕೆ. ಶಿವಕುಮಾರ್</p></div>

ಡಿ. ಕೆ. ಶಿವಕುಮಾರ್

   

ನವದೆಹಲಿ: ಬೆಂಗಳೂರು ನಗರದ ಸಮಸ್ಯೆಗಳು ಮತ್ತು ಅಭಿವೃದ್ದಿ ಕುರಿತಂತೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಂಚಾರ ದಟ್ಟಣೆ, ಘನತ್ಯಾಜ್ಯ ನಿರ್ವಹಣೆ ಮತ್ತು ಬೆಂಗಳೂರು ಉಪನಗರ ರೈಲು ಯೋಜನೆಯ ವಿಸ್ತರಣೆ ಕುರಿತಂತೆ ಅವರು ಮಾತುಕತೆ ನಡೆಸಿದರು. 

ADVERTISEMENT

ಭೇಟಿ ಬಳಿಕ ಮಾತನಾಡಿದ ಖಟ್ಟರ್‌, ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ  ಪಿಎಂ ಇ-ಬಸ್ ಸೇವಾ ಅಡಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ‌ಹಂಚಿಕೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಘನತ್ಯಾಜ್ಯ ನಿರ್ವಹಣೆಯಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆಯೂ ಅವರು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.