ಬೆಂಗಳೂರು: ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಪ್ರಮುಖ ಕಾರಣ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಶಿವಮೊಗ್ಗ ಗಲಭೆ ಪ್ರಕರಣವನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.
‘ಶಿವಮೊಗ್ಗ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನದೀಮ್, ಅಬ್ದುಲ್ ರೆಹಮನ್ ಮತ್ತು ಮೊಹಮ್ಮದ್ಜಬಿಪ್ರಮುಖ ಆರೋಪಿಗಳು. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ ಪೊಲೀಸರ ವಿರುದ್ಧ ಚಾಕು ಬೀಸಿದ ಆರೋಪಿಯ ಕಾಲಿಗೆ ಗುಂಡಿಕ್ಕಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
‘ಶಿವಮೊಗ್ಗದ ಚಾಕು ಇರಿತ ಪ್ರಕರಣದ ಆರೋಪಿಗಳು ಪೊಲೀಸರ ಮೇಲೆಯೇ ಚಾಕು ತೋರಿಸಿ ಬೆದರಿಸಿದ್ದಾರೆ. ಇದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತಾಂಧರ, ಜಿಹಾದಿಗಳ ಮೇಲೆ ಹೊಂದಿರುವ ಮಮಕಾರವೇ ಇದಕ್ಕೆ ನೇರ ಕಾರಣ. ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ’ ಎಂದು ಬಿಜೆಪಿ ಪ್ರಶ್ನಿಸಿದೆ.
‘ಈ ಹಿಂದೆ ಡಿಜೆ ಹಳ್ಳಿ, ಹುಬ್ಬಳ್ಳಿ, ದಕ್ಷಿಣ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ ಮತಾಂಧ ಜಿಹಾದಿ ಶಕ್ತಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ, ಷಡ್ಯಂತ್ರವನ್ನು ಹತ್ತಿಕ್ಕಲಾಗಿದೆ. ಸಮಾಜ ಘಾತುಕ ಶಕ್ತಿಗಳನ್ನು ಬಗ್ಗುಬಡಿಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ’ ಎಂದು ಬಿಜೆಪಿ ತಿಳಿಸಿದೆ.
ಇವನ್ನೂ ಓದಿ...
*ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು
*ಉದ್ವಿಗ್ನ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬಯುವಕನಿಗೆ ಚೂರಿ ಇರಿತ
*ಸಾವರ್ಕರ್, ಟಿಪ್ಪುಫ್ಲೆಕ್ಸ್ ಅಳವಡಿಕೆ ವಿವಾದ:ಶಿವಮೊಗ್ಗ ಉದ್ವಿಗ್ನ
*ಶಿವಮೊಗ್ಗ ಗಲಭೆ: ಮೂರು ದಿನ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ನಿಷೇಧ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.