ಶಿವಮೊಗ್ಗ: ಇಲ್ಲಿಯ ಕೋಟೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದ್ದು, ಮಳಿಗೆ ತೆರೆಯುವ ಹಿಂದೂ ವ್ಯಾಪಾರಿಗಳು ಅಂಗಡಿಯ ಮೇಲೆ ಕೇಸರಿ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಐದು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಹಿಂದಿನಿಂದಲೂ ಎಲ್ಲ ಧರ್ಮದ ವ್ಯಾಪಾರಿಗಳು ಭಾಗವಹಿಸುತ್ತಿದ್ದರು. ಆದರೆ, ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಬಜರಂಗದಳದ ಮುಖಂಡರು ಮಳಿಗೆಗಳ ನಿರ್ವಹಣೆಯ ಟೆಂಡರ್ ಪಡೆದಿದ್ದು, ಮುಸ್ಲಿಮರಿಗೆ ಮಳಿಗೆ ಹಾಕಲು ಅವಕಾಶ ನೀಡಿಲ್ಲ.
ಈ ಬಾರಿ ಗೊಂದಲ ನಿರ್ಮಾಣವಾದ ಕಾರಣ ಹೆಚ್ಚಿನ ವ್ಯಾಪಾರಿಗಳು ಬಂದಿಲ್ಲ. ಮಳಿಗೆ ತೆರೆಯುವ ಎಲ್ಲ ವ್ಯಾಪಾರಿಗಳು ಈಗ ಕೇಸರಿ ಬಾವುಟ ಹಾಕಿದ್ದಾರೆ. ಆ ಮೂಲಕ ಜಾತ್ರೆಯಲ್ಲಿ ಮುಸ್ಲಿಮರು ಭಾಗವಹಿಸಿಲ್ಲ ಎಂಬ ಸಂದೇಶವನ್ನು ಸಾರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.