ADVERTISEMENT

ಬೇಸಿಗೆ ರಜೆ ಅವಧಿ ಕಡಿತ ಸಲ್ಲದು: ಶಿಕ್ಷಣ ಇಲಾಖೆ

ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

​ಪ್ರಜಾವಾಣಿ ವಾರ್ತೆ
Published 20 ಮೇ 2024, 16:23 IST
Last Updated 20 ಮೇ 2024, 16:23 IST
   

ಬೆಂಗಳೂರು: ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.‌

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಏಪ್ರಿಲ್‌ 11ರಿಂದ ಮೇ 28ರ ವರೆಗೆ ಬೇಸಿಗೆ ರಜೆ ಘೋಷಿಸಲಾಗಿತ್ತು. ಆದರೆ, ಕೆಲವು ಶಾಲೆಗಳು ರಜೆ ಕಡಿತಗೊಳಿಸಿದ್ದವು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಿಗದಿಯಂತೆಯೇ ಶೈಕ್ಷಣಿಕ ರಜೆ ಮುಂದುವರಿಸುವಂತೆ ಕೋರಿತ್ತು. ಹೀಗಾಗಿ, ಈ ಹಿಂದೆ ನಿಗದಿ ಮಾಡಿದಂತೆಯೇ ಶಾಲೆಗಳನ್ನು ಆರಂಭಿಸಲು ಎಲ್ಲ ಉಪ ನಿರ್ದೇಶಕರು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.