ADVERTISEMENT

ಶಾಸಕರಿಗೆ ಆಮಿಷ ₹50 ಕೋಟಿ: ಜಟಾಪಟಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 15:16 IST
Last Updated 14 ನವೆಂಬರ್ 2024, 15:16 IST
<div class="paragraphs"><p>ಬಿಜೆಪಿ, ಕಾಂಗ್ರೆಸ್</p></div>

ಬಿಜೆಪಿ, ಕಾಂಗ್ರೆಸ್

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ‘ರಾಜ್ಯ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ, ಕಾಂಗ್ರೆಸ್‌ನ 50 ಶಾಸಕರಿಗೆ ತಲಾ ₹50 ಕೋಟಿ ಆಮಿಷ ಒಡ್ಡಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಆರೋಪ ನಿಜ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲ ಸಚಿವರು ಹೇಳಿದ್ದಾರೆ.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸೇರಿದಂತೆ ವಿರೋಧ ಪಕ್ಷದ ಹಲವು ನಾಯಕರು ಮುಖ್ಯಮಂತ್ರಿ ಮಾಡಿದ್ದ ಆರೋಪವನ್ನು ನಿರಾಕರಿಸಿದ್ದು, ಹೇಳಿಕೆಯನ್ನು ಖಂಡಿಸಿದ್ದಾರೆ.

ಆಮಿಷ ಒಡ್ಡಿದ್ದು ನಿಜ: ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷ ಒಡ್ದುತ್ತಿದೆ. ಆಪರೇಷನ್‌ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದಾರೆ. ಉಳಿದ ವಿಚಾರಗಳನ್ನು ನಂತರ ಬಹಿರಂಗ ಪಡಿಸಲಾಗುವುದು’ ಎಂದರು.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾತನಾಡಿ, ‘ಕಳೆದ 18 ತಿಂಗಳಿನಿಂದಲೂ ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಇಂತಹ ಕೆಲಸ ಎಲ್ಲವೂ ಸಾಧ್ಯ. ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಅವರ ಕೆಲಸ’ ಎಂದು ಟೀಕಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.