ಬೆಂಗಳೂರು:‘ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು’ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ. ಆ ಮೂಲಕ ಮೈತ್ರಿ ಧರ್ಮಕ್ಕೆ ಕಂಟಕವಾಗುತ್ತಿದ್ದಾರೆ. ಐದು ವರ್ಷ ಅಧಿಕಾರದಲ್ಲಿದ್ದಾಗ ಅವರು ಏನು ಕೆಲಸ ಮಾಡಿದ್ದಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಪ್ರಶ್ನಿಸಿದ್ದರು. ಇದಕ್ಕೆಪ್ರತಿಕ್ರಿಯಿಸಿದ್ದ ಸಚಿವ ಜಿ.ಟಿ. ದೇವೇಗೌಡ,‘ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ನನಗೆ ಅಪಾರ ಗೌರವ ಇದೆ. ಎಚ್. ವಿಶ್ವನಾಥ್ ಹೇಳಿಕೆಗೆ ಅಷ್ಟೊಂದು ಮಹತ್ವ ನೀಡುವುದು ಬೇಡ’ ಎಂದು ಹೇಳಿದ್ದರು.
ಈ ಸಂಬಂಧಸಿದ್ದರಾಮಯ್ಯ ಟ್ವೀಟರ್‌ನಲ್ಲಿ ಮೇಲಿನಂತೆಪ್ರತಿಕ್ರಿಯಿಸಿದ್ದಾರೆ.
ಮುಂದುವರಿದು ಮತ್ತೊಂದು ಟ್ವೀಟ್‌ನಲ್ಲಿ, ‘ನನ್ನ ಯಾವ ಕಾರ್ಯಕ್ರಮವೂ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ, ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ.... ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ’ ಎಂದು ಸವಾಲು ಹಾಕಿದ್ದಾರೆ.
ಇವನ್ನೂ ಓದಿ
*ವಿಶ್ವನಾಥ್ ಹೇಳಿಕೆ, ಕಾಂಗ್ರೆಸ್ ಮುಖಂಡರ ಪ್ರತಿಕ್ರಿಯೆ; ಪರಮೇಶ್ವರ ಗರಂ
*‘ಮೊದಲು ಜಿ.ಟಿ ದೇವೇಗೌಡ ಆಯ್ತು, ಈಗ ವಿಶ್ವನಾಥ್, ಮುಂದೆ ಯಾರೋ..’
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.