ADVERTISEMENT

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಸಿಪಿವೈ ಕುರಿತಂತೆ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 5:54 IST
Last Updated 22 ಅಕ್ಟೋಬರ್ 2024, 5:54 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಮೈಸೂರು: 'ಉಪಚುನಾವಣೆಗೆ ತಯಾರಿ ನಡೆದಿದೆ. ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇಂದೇ ಅಭ್ಯರ್ಥಿಗಳ ಘೋಷಣೆ ಆಗಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಟಿ.ಕೆ.ಬಡಾವಣೆಯ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಾಗಲೇ ಸಂಡೂರು ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಅವರ ಪತ್ನಿ ಕಣಕ್ಕಿಳಿಸಲಾಗುವುದು. ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಯಾರೆಂಬುದು ನಿರ್ಧರಿಸಬೇಕು' ಎಂದರು.

ADVERTISEMENT

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆಂಬ ಪ್ರಶ್ನೆಗೆ ಉತ್ತರಿಸಿ, 'ಪಕ್ಷದ ಸಿದ್ಧಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತ. ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಹೆಸರು ಕೂಡ ಇದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವ ಕಾರಣ ಅವರೇ ಸೂಕ್ತ ಅಭ್ಯರ್ಥಿ ತೀರ್ಮಾನ ಮಾಡುವರು. ನಾನೂ ಒಳ್ಳೆಯ ಅಭ್ಯರ್ಥಿ ಹಾಕಬೇಕೆಂದು ಹೇಳಿದ್ದೇನೆ' ಎಂದರು.

'ಮಳೆ ಅನಾಹುತ ವರದಿ ತರಿಸಿಕೊಂಡಿದ್ದು, ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅನಾಹುತಗಳ ಕುರಿತು ನಿಗಾ ವಹಿಸಿದ್ದು,‌ ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.