ADVERTISEMENT

ಈಶ್ವರಪ್ಪಗೆ ಸನ್ಮಾನಿಸಲು ಕನಕ ಗುರುಪೀಠ ಸ್ವಾಮೀಜಿ ಕೋರಿಕೆ: ನಿರಾಕರಿಸಿದ ಸಿದ್ದರಾಮಯ್ಯ

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿಯಲ್ಲಿ ಭಾನುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠವು ಆಯೋಜಿಸಿದ್ದ ಸಮಾರಂಭದಲ್ಲಿ ಘಟನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2023, 10:51 IST
Last Updated 2 ಜುಲೈ 2023, 10:51 IST
ಘಟನೆ ನಡೆದ ಸಂದರ್ಭ
ಘಟನೆ ನಡೆದ ಸಂದರ್ಭ   

ಬೆಂಗಳೂರು: ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿಯಲ್ಲಿ ಭಾನುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠವು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಿರಂಜನಾನಂದಪುರಿ ಸ್ವಾಮೀಜಿ ಅವರು ಕೆ.ಎಸ್‌.ಈಶ್ವರಪ್ಪ ಅವರಿಗೆ ಸನ್ಮಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೇಳಿದಾಗ, ಇದಕ್ಕೆ ‘ನೀವೇ ಸನ್ಮಾನಿಸಿ’ ಎಂದು ಕೈಸನ್ನೇ ಮಾಡಿ ಮುಖ್ಯಮಂತ್ರಿ ಅತ್ತ ಮುಖ ಮಾಡುತ್ತಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮಠದ ಶ್ರೀರಕ್ಷೆ ಸ್ವೀಕರಿಸುವಂತೆ ಈಶ್ವರಪ್ಪ ಅವರಲ್ಲಿ ನಿರೂಪಕರು ಮನವಿ ಮಾಡುತ್ತಾರೆ. ಆಗ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರ ಕೈಗೆ ಸ್ವಾಮೀಜಿ ಅವರು ಶಾಲು ನೀಡಲು ಮುಂದಾಗುತ್ತಾರೆ. ನೀವೇ ಸನ್ಮಾನಿಸಿ ಎಂದು ಮುಖ್ಯಮಂತ್ರಿ ಹೇಳುತ್ತಾರೆ.

ADVERTISEMENT

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಕೇತೋಹಳ್ಳಿಯ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದಲ್ಲಿ ಭಾನುವಾರ ನಡೆದ ಸಮಾಜದ ನೂತನ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.