ADVERTISEMENT

T20 WC | ಸ್ಕಾಟ್ಲೆಂಡ್ ಸಮವಸ್ತ್ರದಲ್ಲಿ ನಂದಿನಿ ಲಾಂಛನ: ಸಂತಸ ಹಂಚಿಕೊಂಡ CM

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮೇ 2024, 9:12 IST
Last Updated 16 ಮೇ 2024, 9:12 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ‘ಎಕ್ಸ್‌‘ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ಎಂದು ತಿಳಿಸಿದ್ದಾರೆ.

‘ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮ ಎರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದೂ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.