ADVERTISEMENT

ಜೆಡಿಎಸ್‌ಗೆ ರಾಜ್ಯ ಪಕ್ಷದ ಸ್ಥಾನ: ರಾಜ್ಯ ಚುನಾವಣಾ ಆಯೋಗ ಪ್ರಕಟ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 16:01 IST
Last Updated 16 ಡಿಸೆಂಬರ್ 2023, 16:01 IST
<div class="paragraphs"><p>ಜೆಡಿಎಸ್‌</p></div>

ಜೆಡಿಎಸ್‌

   

ಬೆಂಗಳೂರು: ಬಿಜೆಪಿ, ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ ಸೇರಿದಂತೆ ಆರು ಪಕ್ಷಗಳು ಮಾತ್ರ ರಾಷ್ಟ್ರೀಯ ಸ್ಥಾನಮಾನ ಹೊಂದಿವೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಜೆಡಿಎಸ್‌ ರಾಜ್ಯ ಪಕ್ಷದ ಸ್ಥಾನಮಾನವನ್ನು ಮಾತ್ರ ಹೊಂದಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ, ಕರ್ನಾಟಕ ರಾಷ್ಟ್ರ ಸಮಿತಿ, ಕನ್ನಡ ಚಳವಳಿ ವಾಟಾಳ್ ಸೇರಿದಂತೆ 110 ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳು ರಾಜ್ಯದಲ್ಲಿವೆ. 190 ಮುಕ್ತ ಚಿಹ್ನೆಗಳೂ ಲಭ್ಯವಿವೆ ಎಂದು ಆಯೋಗ ತಿಳಿಸಿದೆ.

ADVERTISEMENT

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ನಿಯಮಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನಿಯಮಗಳ ಅಡಿಯಲ್ಲಿ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಸಿಪಿಎಂ, ಬಹುಜನ ಸಮಾಜ ‍ಪಕ್ಷ ಹಾಗೂ ನ್ಯಾಷನಲ್‌ ಪೀ‍ಪಲ್ಸ್‌ ಪಾರ್ಟಿಗಳು ರಾಷ್ಟ್ರೀಯ ಪಕ್ಷಗಳೆಂದು ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.