ADVERTISEMENT

ಮಕ್ಕಳನ್ನು ಒಂದನೇ ತರಗತಿಗೆ ದಾಖಲಿಸಲು 6 ವರ್ಷ ತುಂಬಿರುವುದು ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 21:42 IST
Last Updated 26 ಜುಲೈ 2022, 21:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಿಸಲು ಆಯಾ ಶೈಕ್ಷಣಿಕ ವರ್ಷದ ಜೂನ್‌ 1ನೇ ತಾರೀಕಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರಬೇಕು ಎಂದು ವಯೋಮಿತಿ ನಿಗದಿಪಡಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸುವ ಸಂಬಂಧ ಈ ಹಿಂದೆ ಹೊರಡಿಸಿದ್ದ ಆದೇಶಗಳನ್ನು ಹಿಂಪಡೆ
ದಿರುವ ಸರ್ಕಾರ, ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) –2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು– 2012ರಂತೆ ಈ ವಯೋಮಿತಿ ನಿಗದಿಪಡಿಸಿದೆ.

2020ರ ಮಾರ್ಚ್‌ 20ರಂದು ಹೊರಡಿಸಿದ್ದ ಆದೇಶದಲ್ಲಿ ಎಲ್‌ಕೆಜಿಗೆ ದಾಖಲಾಗಲು ಜೂನ್‌ 1ನೇ ತಾರೀಕಿಗೆ 3 ವರ್ಷ 5 ತಿಂಗಳು ಹಾಗೂ ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿ ನಿಗದಿಪಡಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.