ADVERTISEMENT

ಬಕ್ರೀದ್‌ ದಿನ ಜಾನುವಾರು ಹತ್ಯೆಗೆ ಕಡಿವಾಣ: ಸಚಿವ ಪ್ರಭು ಚವ್ಹಾಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 20:04 IST
Last Updated 6 ಜುಲೈ 2022, 20:04 IST
   

ಬೆಂಗಳೂರು: ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಬಲಿ ನೀಡಬಾರದು. ಗೋಹತ್ಯೆ ನಿಷೇಧ ಕಾನೂನು ಪಾಲಿಸಬೇಕು. ಗೋಹತ್ಯೆ ತಡೆಗೆ ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದುಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ ಸೂಚಿಸಿದ್ದಾರೆ.

ಹೊರ ರಾಜ್ಯಗಳಿಂದ ಅಕ್ರಮವಾಗಿ ಗೋವುಗಳು, ಗೋಮಾಂಸ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಡ ಬೇಕು. ಗೋಹತ್ಯೆ ತಡೆಗಟ್ಟುವಲ್ಲಿ ಸಕ್ರಿಯರಾಗಿರಬೇಕು ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಗೆ ಸೂಚಿಸಿದ್ದಾರೆ.

ಬಕ್ರೀದ್‌ಗೆ ಗೋವು, ಹಸು, ಎತ್ತು,‌ ಕರು, ಒಂಟೆಗಳನ್ನು ಬಲಿ ಕೊಡುವ ಸಂಪ್ರದಾಯವಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸಬೇಕು. ಹಬ್ಬದ ಸಮಯದಲ್ಲಿ ಗೋಹತ್ಯೆ ತಡೆಯಲು ಕಾರ್ಯಪಡೆ ನೇಮಕ ಮಾಡಲಾಗಿದೆ. ಗೋಹತ್ಯೆ ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ದಾಖಲಿಸಬೇಕು. ತಡೆ ಯದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರೂ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.