ಬೆಂಗಳೂರು: ರಾಜ್ಯದಲ್ಲಿ ‘ಸ್ಮಾರ್ಟ್ ಸಿಟಿ’ ಅನುದಾನದಲ್ಲಿ ಪ್ರಗತಿಯಲ್ಲಿರುವ ಎಲ್ಲ 230 ಕಾಮಗಾರಿಗಳಿಗೆ ತಿಂಗಳುವಾರು ಭೌತಿಕ ಹಾಗೂ ಆರ್ಥಿಕ ಗುರಿಗಳನ್ನು ನಿಗದಿಪಡಿಸಲಾಗಿದ್ದು, 2023ರ ಜೂನ್‌ನೊಳಗೆ ಪೂರ್ಣಗೊಳಿಸಲಾಗುವುದು ಎಂದು ಸ್ಮಾರ್ಟ್ ಸಿಟಿ ಅಭಿಯಾನದ ತಾಂತ್ರಿಕ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
‘ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ 7 ನಗರಗಳಲ್ಲಿ 35 ಸಭೆಗಳನ್ನು ನಡೆಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆಗಳು ನಡೆದು, ಅನುಷ್ಠಾನದಲ್ಲಿ ಎದುರಾಗುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಕಾಲಮಿತಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ’ ಎಂದು ಹೇಳಿದ್ದಾರೆ.
2 ವರ್ಷಗಳಲ್ಲಿ ₹3,557 ಕೋಟಿ ವೆಚ್ಚದಲ್ಲಿ 354 ಕಾಮಗಾರಿಗಳು ಮುಕ್ತಾಯವಾಗಿದ್ದು, ₹2,493 ಕೋಟಿ ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿವೆ. ಆರ್ಥಿಕ ಪ್ರಗತಿ ಶೇ 86ರಷ್ಟಿದೆ. ಕಾಮಗಾರಿ, ಆರ್ಥಿಕ ಪ್ರಗತಿಯಲ್ಲಿ ರಾಜ್ಯ 3ನೇ ಶ್ರೇಯಾಂಕದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.