ADVERTISEMENT

ಕೊಲೆ ಆರೋಪಿ ದರ್ಶನ್‌ಗೆ ವಿಶೇಷ ಆತಿಥ್ಯ; ತಪ್ಪಿತಸ್ಥರ ಅಮಾನತಿಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 7:28 IST
Last Updated 26 ಆಗಸ್ಟ್ 2024, 7:28 IST
<div class="paragraphs"><p>ಜೈಲಿನಲ್ಲಿ&nbsp;ವಿಲ್ಸನ್ ಗಾರ್ಡನ್ ನಾಗನ ಜೊತೆಗೆ&nbsp; ಹರಟೆ ಹೊಡೆಯುತ್ತಿರುವ ದರ್ಶನ್ (ಒಳಚಿತ್ರದಲ್ಲಿ ಸಿದ್ದರಾಮಯ್ಯ)</p></div>

ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ  ಹರಟೆ ಹೊಡೆಯುತ್ತಿರುವ ದರ್ಶನ್ (ಒಳಚಿತ್ರದಲ್ಲಿ ಸಿದ್ದರಾಮಯ್ಯ)

   

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಹಾಗೂ ಇತರರಿಗೆ ವಿಶೇಷ ಆತಿಥ್ಯ ಒದಗಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆಯೂ ತಾಕೀತು ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜೈಲಿನ ಒಳಗೆ ಸಹಚರರ ಜೊತೆ ಕುರ್ಚಿ ಮೇಲೆ ಕುಳಿತು ಕಾಫಿ ಹೀರುತ್ತಾ, ಸಿಗರೇಟ್‌ ಸೇದುತ್ತಿದ್ದಾರೆ ಎನ್ನಲಾದ ಫೋಟೊ ಬಹಿರಂಗವಾಗಿದೆ.

ಬೆಡ್ ಮೇಲೆ ಕುಳಿತು ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಹ ಸಾಮಾಜಿಕ‌ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.