ಸಿರುಗುಪ್ಪ (ಬಳ್ಳಾರಿ ಜಿಲ್ಲೆ): ‘ರಾಜ್ಯ ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವುದು ಸರಿಯಲ್ಲ’ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು.
ಮಂಗಳವಾರ ಇಲ್ಲಿನ ಶ್ರೀಶೈಲ ಪೀಠದ ಶಾಖಾ ಮಠದ ಪಿನಾಕಿ ಆಶ್ರಮಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.
‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕರು. ರಾಜ್ಯದಲ್ಲಿ ಸಮಾಜದ ಸಂಘಟನೆ, ಬಿಜೆಪಿ ಕಟ್ಟಿರುವ ಕೀರ್ತಿ ಅವರಿಗೆ ಸಲ್ಲಬೇಕು. ಒಂದುವರೆ ವರ್ಷದಿಂದ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಳಿವಯಸ್ಸಿನಲ್ಲೂ ರಾಜ್ಯದಾದ್ಯಂತ ಸುತ್ತಾಡುತ್ತಿದ್ದಾರೆ. ಹೀಗಿರುವಾಗ ಅವರನ್ನು ಬದಲಾವಣೆ ಮಾಡುವುದು ಸರಿಯಲ್ಲ. ಅಧಿಕಾರಕ್ಕಾಗಿ ಯಾರೂ ರಾಜಕಾರಣ ಮಾಡಬಾರದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.