ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಫಲಿತಾಂಶ ಇಂದು

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 18:44 IST
Last Updated 9 ಜುಲೈ 2024, 18:44 IST
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಣೆ ಮಾಡುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಣೆ ಮಾಡುತ್ತಿರುವ ದೃಶ್ಯ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಫಲಿತಾಂಶ ಜುಲೈ 10ರಂದು ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಜೂನ್‌ 14ರಿಂದ 22ರವರೆಗೆ ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ 2.23 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.