ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಂಕಗಳ ಕೊರತೆಯಾಗುವವರಿಗೆ ಈ ಬಾರಿಯೂ ಗರಿಷ್ಠ ಶೇ 10 ರಷ್ಟು ಕೃಪಾಂಕ ನೀಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ಯಾವುದಾದರೂ ಮೂರು ವಿಷಯಗಳಿಗೆ ಮಾತ್ರ ಈ ಕೃಪಾಂಕ ಅನ್ವಯವಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್– 19 ಸಾಂಕ್ರಾಮಿಕ ಕಾಯಿಲೆಯಿಂದಾಗಿ ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿದಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
25 ಕ್ಕಿಂತ ಹೆಚ್ಚು ಮತ್ತು 30ಕ್ಕಿಂತ ಕಡಿಮೆ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ.
2021 ರಲ್ಲಿಯೂ ಶೇ 10 ರಷ್ಟು ಕೃಪಾಂಕ ನೀಡಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್ ಕಾರಣಕ್ಕೆ ಪರೀಕ್ಷೆಗೆ ಹಾಜರಾದ ಎಲ್ಲರನ್ನೂ ಸಾಮೂಹಿಕವಾಗಿ ಉತ್ತೀರ್ಣಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.