ADVERTISEMENT

ಬೆಂಗಳೂರು | ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ: ಭಾವನ ಪ್ರಥಮ

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 13:41 IST
Last Updated 5 ಜೂನ್ 2024, 13:41 IST
ಭಾವನಾ ಟಿ.ಎಸ್‌.
ಭಾವನಾ ಟಿ.ಎಸ್‌.   

ಬೆಂಗಳೂರು: ಮಲ್ಲಸಂದ್ರ ಬಾಬಣ್ಣ ಲೇಔಟ್‌ನ ಬಿಎನ್‌ಆರ್‌ ಪಬ್ಲಿಕ್‌ ಶಾಲೆಯ ಭಾವನ ಟಿ.ಎಸ್‌. ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದ ನಂತರ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಫಲಿತಾಂಶ ಪ್ರಕಟವಾದಾಗ ಭಾವನ 625ಕ್ಕೆ 620 ಅಂಕಗಳನ್ನು ಪಡೆದಿದ್ದರು. ಕನ್ನಡ, ಹಿಂದಿ, ಗಣಿತ, ಸಮಾಜ ವಿಜ್ಞಾನದಲ್ಲಿ ಪೂರ್ಣ ಅಂಕ ಗಳಿಸಿದ್ದ ಅವರಿಗೆ ಇಂಗ್ಲಿಷ್‌ನಲ್ಲಿ 99 ಹಾಗೂ ವಿಜ್ಞಾನದಲ್ಲಿ 96 ಅಂಕಗಳು ಬಂದಿದ್ದವು. ಹಾಗಾಗಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ವಿಜ್ಞಾನದಲ್ಲಿ ನಾಲ್ಕು ಹಾಗೂ ಇಂಗ್ಲಿಷ್‌ನಲ್ಲಿ ಒಂದು ಅಂಕಗಳು ಹೆಚ್ಚುವರಿಯಾಗಿ ದೊರೆತಿವೆ.

2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದಾಗ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಕೊಣ್ಣೂರ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದರು. ಈಗ ಅಂಕಿತಾ ಜೊತೆ ಭಾವನ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.