ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ ಅವಧಿಯನ್ನು ಸರ್ಕಾರ ಇದೇ ವರ್ಷದ ಆಗಸ್ಟ್‌ವರೆಗೆ ವಿಸ್ತರಿಸಿದೆ.
ರಾಜ್ಯ ಶಿಕ್ಷಣ ನೀತಿಯ ಕರಡು ರೂಪಿಸಲು ಶಿಕ್ಷಣ ತಜ್ಞ ಹಾಗೂ ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅಧ್ಯಕ್ಷತೆಯಲ್ಲಿ 11 ಸದಸ್ಯರನ್ನು ಒಳಗೊಂಡ ‘ರಾಜ್ಯ ಶಿಕ್ಷಣ ನೀತಿ ಆಯೋಗ’ವನ್ನು ರಚಿಸಿ ರಾಜ್ಯ ಸರ್ಕಾರ ಕಳೆದ ಅ.11ರಂದು ಆದೇಶ ಹೊರಡಿಸಿತ್ತು. 2024ರ ಫೆ. 28ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕಾಲಮಿತಿ ನಿಗದಿ ಮಾಡಲಾಗಿತ್ತು.
‘ಆಯೋಗ ಈಗಾಗಲೇ ಪ್ರಥಮ ವರದಿ ಸಲ್ಲಿಸಿದೆ. ಇನ್ನಷ್ಟು ವಿಷಯಗಳ ಕುರಿತು ಅಧ್ಯಯನ ನಡೆಸಲು, ಮಾಹಿತಿ ಸಂಗ್ರಹಿಸಲು ಸಮಯಾವಕಾಶ ನೀಡುವಂತೆ ಆಯೋಗ ಮನವಿ ಮಾಡಿತ್ತು. ಹಾಗಾಗಿ, ಅವಧಿ ವಿಸ್ತರಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.