ADVERTISEMENT

ನೋಂದಣಿ ಶುಲ್ಕ ರಿಯಾಯ್ತಿ ವಿಸ್ತರಣೆ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 15:19 IST
Last Updated 8 ಏಪ್ರಿಲ್ 2022, 15:19 IST
   

ಬೆಂಗಳೂರು: ಸ್ಥಿರಾಸ್ತಿಗಳ ನೋಂದಣಿಗಾಗಿ ಮುದ್ರಾಂಕ ಶುಲ್ಕ ನಿಗದಿಗೆ ಮಾರ್ಗಸೂಚಿ ದರದಲ್ಲಿ ಶೇ 10ರಷ್ಟು ರಿಯಾಯ್ತಿ ಸೌಲಭ್ಯವನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌, ಫ್ಲ್ಯಾಟ್‌ ಮತ್ತು ಇತರೆ ಸ್ಥಿರಾಸ್ತಿಗಳ ನೋಂದಣಿಗೆ ಮುದ್ರಾಂಕ ಶುಲ್ಕ ನಿಗದಿಗೆ ಮಾರ್ಗ ಸೂಚಿ ದರದ ಶೇ 10 ರಷ್ಟು ರಿಯಾಯ್ತಿಯನ್ನು ಮಾರ್ಚ್‌ 31ರವರೆಗೂ ನೀಡಲಾಗಿತ್ತು. ರಿಯಾಯ್ತಿ ಮುಂದುವರಿಸಬೇಕೆಂಬ ಬೇಡಿಕೆ ಹೆಚ್ಚಿದೆ’ ಎಂದರು.

ಮೂರು ತಿಂಗಳವರೆಗೂ ರಿಯಾಯ್ತಿ ಮುಂದುವರಿಸಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.